
ನಟಸಾರ್ವಭೌಮ
ಡಾ. ರಾಜ್‍ಕುಮಾರ್ (ಜನನ:
ಏಪ್ರಿಲ್ ೨೪,
೧೯೨೯ - ಮರಣ:
ಏಪ್ರಿಲ್ ೧೨,
೨೦೦೬)
ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, ೨೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ. ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು
ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗು ಹ೦ಪಿ ವಿಶ್ವವಿದ್ಯಾಲಯದಿ೦ದ ನಾಡೋಜ ಪದವಿಯನ್ನು ಪಡೇದಿದಾರೆ. ಭಾರತ ಸರ್ಕಾರದಿಂದ ಪ್ರತಿಷ್ಠಿತ
ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ.
ಕರ್ನಾಟಕ ಸರ್ಕಾರದಿಂದ
ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು.
೨೦೦೦ನೇ ವರ್ಷದಲ್ಲಿ ಕುಖ್ಯಾತ ದಂತಚೋರ
ವೀರಪ್ಪನ್‍ನಿಂದ ಅಪಹರಣವಾಗಿದ್ದ ರಾಜ್‍ಕುಮಾರ್ ೧೦೮ ದಿನಗಳ ನಂತರ ಬಿಡುಗಡೆಯಾಗಿದ್ದರು. ೨೦೦೬ ಏಪ್ರಿಲ್ ೧೨ರಂದು ಬೆಂಗಳೂರಿನಲ್ಲಿ, ಹೃದಯಾಘಾತದಿಂದ ಮರಣ ಹೊಂದಿದರು
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ